Publish Date: Sat, 30 Sep 2017 (12:00 IST)
Updated Date: Sat, 30 Sep 2017 (12:02 IST)
ಬೆಂಗಳೂರು: ಗೋವಾದ ಬೈನಾ ಬೀಚ್ ಬಳಿಯ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಗೋವಾ ಸಿಎಂ ಮನೋಹರ್ ಪರಿಕ್ಕರ್ ಗೆ ಪತ್ರ ಬರೆದಿದ್ದಾರೆ.
ಇಲ್ಲಿನ ಕನ್ನಡಿಗರು 40 ವರ್ಷಕ್ಕಿಂತಲೂ ಅಧಿಕ ಕಾಲದಿಂದ ಇಲ್ಲಿ ನೆಲೆಸಿದ್ದಾರೆ. ಇಲ್ಲಿ ಇವರ ನಿವಾಸಗಳನ್ನು ನೆಲಸಮ ಮಾಡಿದ್ದರಿಂದ ಉತ್ತರ ಕರ್ನಾಟಕದ ಹಲವು ಕುಟುಂಬಗಳಿಗೆ ತೊಂದರೆಯಾಗಿದೆ.
ಹೀಗಾಗಿ ಮಾನವೀಯ ನೆಲೆಯಲ್ಲಿ ಇಲ್ಲಿನ ಕನ್ನಡಿಗರ ವಸತಿ ನಿಲಯಗಳನ್ನು ಕೆಡವುವ ಕೆಲಸ ನಿಲ್ಲಿಸಿ ಅವರಿಗೆ ರಕ್ಷಣೆ ಕೊಡಿ ಎಂದು ಮನವಿ ಮಾಡುವುದಾಗಿ ಅವರು ಪತ್ರದಲ್ಲಿ ಬರೆದಿದ್ದಾರೆ. ಗೋವಾದ ಬಿಜೆಪಿ ಸರ್ಕಾರ ರಾಜ್ಯದ ಬಿಜೆಪಿ ನಾಯಕರ ಮಾತಿಗೆ ಬೆಲೆ ಕೊಡುತ್ತಾ ಕಾದು ನೋಡಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ