Daily Horoscope

ಕುಮಾರಸ್ವಾಮಿ ಹೇಳಿದ್ದೊಂದು ಮಾಡುತ್ತಿರುವುದು ಇನ್ನೊಂದು!

Webdunia
ಮಂಗಳವಾರ, 14 ಆಗಸ್ಟ್ 2018 (10:57 IST)
ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿವಾದ ಭುಗಿಲೆದ್ದಾಗ ನಾವು ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಮಾಡುತ್ತೇವೆ ಎಂದಿದ್ದ ಸಿಎಂ ಕುಮಾರಸ್ವಾಮಿ ಈಗ ಉಲ್ಟಾ ಹೊಡೆದಿದ್ದಾರೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
 

ಬೆಳಗಾವಿಯಲ್ಲಿರುವ ಕೆ-ಶಿಪ್ ಕಾರ್ಯಾಲಯವನ್ನು ಹಾಸನಕ್ಕೆ ವರ್ಗಾಯಿಸುತ್ತಿರುವ ಸಿಎಂ ಕುಮಾರಸ್ವಾಮಿಗೆ ನಡೆ ಬಗ್ಗೆ ಅವರು ಈ ರೀತಿ ಟೀಕೆ ಮಾಡಿದ್ದಾರೆ. ಕುಮಾರಸ್ವಾಮಿ ಸಹೋದರ, ಎಚ್ ಡಿ ರೇವಣ್ಣ ಚಿತಾವಣೆ ಮೇರೆಗೆ ಈ ಸ್ಥಳಾಂತರ ನಡೆಯುತ್ತಿದೆ ಎಂಬ ಆರೋಪವಿದೆ. ಈ ಬಗ್ಗೆ ಈಗಾಗಲೇ ಬೆಳಗಾವಿಯಲ್ಲಿ ಪ್ರತಿಭಟನೆ ಶುರುವಾಗಿದೆ.

ಈ ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ‍ಶೆಟ್ಟರ್ ‘ಸಿಎಂ ಕುಮಾರಸ್ವಾಮಿ ಹೇಳಿದ್ದೊಂದು ಮಾಡುತ್ತಿರುವುದು ಇನ್ನೊಂದು. ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಮಾಡುತ್ತೇವೆ ಎಂದು ಈಗ ಕೆ-ಶಿಪ್ ಕಾರ್ಯಾಲಯವನ್ನೇ ವರ್ಗಾಯಿಸುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಷ್ಟೇ ಅಲ್ಲದೆ, ದೇಶದಲ್ಲಿ ಅತೀ ಹೆಚ್ಚು ರಾಜ್ಯವನ್ನಾಳಿದ್ದು ಹಿಂದೆ ಕಾಂಗ್ರೆಸ್ ನವರು. ನಮ್ಮ ರಾಜ್ಯವನ್ನೂ ಹಾಳು ಮಾಡಿದ್ದು ಕಾಂಗ್ರೆಸ್ ನವರು. ಈಗ ಅಂತಹವರ ಜತೆ ಸೇರಿಕೊಂಡು ಜೆಡಿಎಸ್ ಸರ್ಕಾರ ನಡೆಸುತ್ತಿದೆ ಎಂದೂ ಅವರು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments