Publish Date: Fri, 29 Sep 2017 (19:00 IST)
Updated Date: Fri, 29 Sep 2017 (19:03 IST)
ಪೊಲೀಸ್ ಅಧಿಕಾರಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತ ಬಂಧನ ವಿರೋಧಿಸಿ ಕೆಲವೆಡೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ.
ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 15 ರಂದು ಕಿಲ್ಲೆ ಮೈದಾನದಲ್ಲಿ ಜಗದೀಶ್ ಕಾರಂತ, ಪಿಎಸ್‌ಐ ಖಾದರ್‌ನನ್ನು ಯಾಕೆ ಬೆತ್ತಲೆ ಓಡಿಸಬಾರದು. ಆತನ ತಲೆಯ ಬೋಳಿಸಿ, ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಿಸುವುದು ಲೆಕ್ಕವೇ ಅಲ್ಲ ಎನ್ನುವ ಅವಹೇಳನಕಾರಿ ಹೇಳಿಕೆ ನೀಡಿ ಉದ್ಧಟತನ ಮೆರೆದಿದ್ದರು.
ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅಸಭ್ಯ ಪದಗಳನ್ನು ಬಳಸಿದ್ದಕ್ಕಾಗಿ ಜಗದೀಶ್ ಕಾರಂತ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಜಗದೀಶ್ ಕಾರಂತ ಇಂದು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪುತ್ತೂರು ನಗರ ಠಾಣೆಯ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.