Webdunia - Bharat's app for daily news and videos

Install App

ಜಗದೀಶ್ ಕಾರಂತ ಬಂಧನ: ಕಿಡಿಗೇಡಿಗಳಿಂದ ಕಲ್ಲು ತೂರಾಟ

Webdunia
ಶುಕ್ರವಾರ, 29 ಸೆಪ್ಟಂಬರ್ 2017 (19:00 IST)
ಪೊಲೀಸ್ ಅಧಿಕಾರಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ರಾಜ್ಯ ಸಂಚಾಲಕ ಜಗದೀಶ್ ಕಾರಂತ ಬಂಧನ ವಿರೋಧಿಸಿ ಕೆಲವೆಡೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ.
ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಸೆಪ್ಟೆಂಬರ್ 15 ರಂದು ಕಿಲ್ಲೆ ಮೈದಾನದಲ್ಲಿ ಜಗದೀಶ್ ಕಾರಂತ, ಪಿಎಸ್‌ಐ ಖಾದರ್‌ನನ್ನು ಯಾಕೆ ಬೆತ್ತಲೆ ಓಡಿಸಬಾರದು. ಆತನ ತಲೆಯ ಬೋಳಿಸಿ, ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಿಸುವುದು ಲೆಕ್ಕವೇ ಅಲ್ಲ ಎನ್ನುವ ಅವಹೇಳನಕಾರಿ ಹೇಳಿಕೆ ನೀಡಿ ಉದ್ಧಟತನ ಮೆರೆದಿದ್ದರು.  
 
ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅಸಭ್ಯ ಪದಗಳನ್ನು ಬಳಸಿದ್ದಕ್ಕಾಗಿ ಜಗದೀಶ್ ಕಾರಂತ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
 
ಜಗದೀಶ್ ಕಾರಂತ ಇಂದು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪುತ್ತೂರು ನಗರ ಠಾಣೆಯ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments