ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಸಚಿವರಿಂದ ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿವಾಹಿನಿಯ ವಿರುದ್ಧ ಪ್ರಕರಣ ದಾಖಲಿಸಿರುವುದು ತಪ್ಪು. ಈ ಮೂಲಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಮಾಧ್ಯಮಗಳನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವರಾದ ತನ್ವೀರ್ ಸೇಠ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿರುವುದು ಮಹಾತಪ್ಪು. ಸಚಿವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನಿಖೆ ನಡೆಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಅಶ್ಲೀಲ ಚಿತ್ರ ವೀಕ್ಷಣೆ ಆರೋಪ ಎದುರಿಸುತ್ತಿರುವ ಸಚಿವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಹೋರಾಟ ನಡೆಸುವುದಾಗಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ