Publish Date: Mon, 31 Jul 2017 (14:55 IST)
Updated Date: Mon, 31 Jul 2017 (14:58 IST)
ಲಿಂಗಾಯುತ ಪ್ರತ್ಯೇಕ ಧರ್ಮ ಕುರಿತಂತೆ ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯಬೇಡಿ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸಲಹೆ ನೀಡಿದ್ದಾರೆ.
ವೀರಶೈವ-ಲಿಂಗಾಯುತ ಮಠಾಧೀಶರು ಒಂದು ಕಡೆ ಸೇರಿ ಒಮ್ಮತದ ನಿರ್ಧಾರಕ್ಕೆ ಬಂದಲ್ಲಿ ಬಿಜೆಪಿ ಬೆಂಬಲಿಸಲಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ರಾಜಕೀಯಕ್ಕಾಗಿ ವೀರಶೈವ-ಲಿಂಗಾಯುತ ಧರ್ಮವನ್ನು ಒಡೆಯಲು ಸಿದ್ದರಾಗಿದ್ದಾರೆ. ಒಡೆದು ಆಳುವ ಕನಸನ್ನು ಅವರು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಲಿಂಗಾಯುತ ಪ್ರತ್ಯೇಕ ಧರ್ಮ ಹೋರಾಟ ತೀವ್ರವಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಆರೋಪ, ಪ್ರತ್ಯಾರೋಪಗಳ ಸುರಿಮಳೆ ಮುಂದುವರೆದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.