Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಆರೋಪಗಳಿಗೆ ಜಗದೀಶ್ ಶೆಟ್ಟರ್ ತಿರುಗೇಟು

ಸಿದ್ದರಾಮಯ್ಯ ಆರೋಪಗಳಿಗೆ ಜಗದೀಶ್ ಶೆಟ್ಟರ್ ತಿರುಗೇಟು
ಬೆಂಗಳೂರು , ಮಂಗಳವಾರ, 19 ಜುಲೈ 2016 (15:04 IST)
ಬಿಜೆಪಿ ಸರಕಾರ ಅಧಿಕಾದಲ್ಲಿದ್ದ ಸಮಯದಲ್ಲಿ ರಾಜ್ಯದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆಗ ಅವರು ಪ್ರತಿಪಕ್ಷ ನಾಯಕನಾಗಿ ಏನು ಮಾಡುತ್ತಿದ್ದರು. ಅವರು ಅಸಮರ್ಥ ಪ್ರತಿಪಕ್ಷ ನಾಯಕನೇ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ.ಜೆ.ಜಾರ್ಜ್ ಅವರನ್ನು ರಕ್ಷಣೆ ಮಾಡುತ್ತಿದ್ದು, ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಆದರೆ, ನಾವು ಪ್ರಕರಣವನ್ನು ಮುಚ್ಚಿಹಾಕಲು ಬಿಡುವುದಿಲ್ಲ ಎಂದು ಹೇಳಿದರು.
 
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಅಧಿಕಾರಗಳ ಆತ್ಮಹತ್ಯೆ ಪ್ರಕರಣಗಳು ನಡೆದಿವೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ನೆಲಕ್ಕೆ ಬಿದ್ರೂ ಮಿಸೆ ಮಣ್ಣಾಗಲಿಲ್ಲ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಖಾತೆ ಸಚಿವ ಜೆ.ಪರಮೇಶ್ವರ್ ಮಾತನಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ಮಂಡ್ಯ ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಮರಿಗೌಡ ಅವರನ್ನು ಯಾಕೆ ಬಂಧಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಿಎಂ ಆಪ್ತ ಮರಿಗೌಡ ವಿರುದ್ಧ ಸಾಕಷ್ಟು ಪ್ರಕರಣಗಳ ಬಾಕಿ ಇವೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ನಾಯಕರಿಗೆ ರಾಜೀನಾಮೆ ಕೇಳುವ ನೈತಿಕತೆ ಇದೆಯೇ: ಸಿಎಂ ಸಿದ್ದರಾಮಯ್ಯ