Select Your Language

Notifications

webdunia
webdunia
webdunia
webdunia

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಜಗತ್ ಪ್ರಕಾಶ್ ನಡ್ಡಾ

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಜಗತ್ ಪ್ರಕಾಶ್ ನಡ್ಡಾ
ನವದೆಹಲಿ , ಸೋಮವಾರ, 20 ಜನವರಿ 2020 (10:08 IST)
ನವದೆಹಲಿ : ಇಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಜೆಪಿ ಕಾರ್ಯಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅಧಿಕಾರ ಸ್ವೀಕರಿಸಲಿದ್ದಾರೆ.


ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಕೇಂದ್ರ ಸಚಿವರು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.


ಈಗಾಗಲೇ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ನಡ್ಡಾ ಅವರು, ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ  ಅವರು ಕೇಂದ್ರ ಗೃಹ ಸಚಿವರಾದ ವೇಳೆ ತಮ್ಮ ಅಧಿಕಾರ ಸ್ವೀಕರಿಸಬೇಕಿತ್ತು. ಆದರೆ ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಹರಿಯಾಣದ ಚುನಾವಣೆಯಲ್ಲಿ ಅಮಿತ್ ಶಾ ಪಾತ್ರ ಮುಖ್ಯವಾಗಿದ್ದರಿಂದ ಇದೀಗ ನಡ್ಡಾ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿ ಗೆ ಶೀಘ್ರದಲ್ಲಿಯೇ ನೂತನ ಅಧ್ಯಕ್ಷರನ್ನು ನೇಮಕ ಮಾಡಿ-ಸೋನಿಯಾಗೆ ಪರಮೇಶ್ವರ್ ಮನವಿ