Publish Date: Wed, 19 Apr 2023 (13:19 IST)
Updated Date: Wed, 19 Apr 2023 (12:20 IST)
ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಪಕ್ಷದಲ್ಲಿ ಉಂಟಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮುಂದಾಗಿದ್ದಾರೆ.
ಬಿಜೆಪಿ ವಿರುದ್ಧ ಉತ್ತರ ಕರ್ನಾಟಕ ಭಾಗದಲ್ಲಿ ಅತೀ ದೊಡ್ಡ ಹೊಡೆತ ಕೊಡಲು ಮುಂದಾಗಿರುವ ಶೆಟ್ಟರ್ ನಡೆಗೆ ಬಿಜೆಪಿ ವಲಯದಲ್ಲಿ ಗಲಿಬಿಲಿ ಶುರುವಾಗಿದ್ದು, ಇದಕ್ಕೆ ಮುಲಾಮು ಹಚ್ಚಲು ನಡ್ಡಾ ಮಂಗಳವಾರ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಈಗಾಗಲೇ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿರುವ ಅವರು ಮುನಿಸಿಕೊಂಡಿರುವ ಲಿಂಗಾಯತ ಸಮುದಾಯದ ಅಸಮಾಧಾನವನ್ನ ಶಮನಮಾಡಲು ಹೊಸದೊಂದು ತಂತ್ರಕ್ಕೆ ಮುಂದಾಗಿದ್ದಾರೆ. ನಗರದಲ್ಲಿ ಎರಡು ದಿನಗಳ ಕಾಲ ಉಳಿದುಕೊಳ್ಳಲಿರುವ ಅವರು ವಿವಿಧ ವಿಷಯಗಳ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚಿಸಲಿದ್ದಾರೆ.