Select Your Language

Notifications

webdunia
webdunia
webdunia
webdunia

ಮುಡಾ ಹಗರಣವನ್ನು ಸಿಬಿಐಗೆ ವಹಿಸಲು ಜಗದೀಶ ಶೆಟ್ಟರ್ ಆಗ್ರಹ

Jagadish Shettar

Sampriya

ಹುಬ್ಬಳ್ಳಿ , ಶುಕ್ರವಾರ, 5 ಜುಲೈ 2024 (17:45 IST)
ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಕೇಳಿಬರುತ್ತಿರುವುದರಿಂದ ಈ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ ಆಗ್ರಹಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಈ ಹಗರಣದಲ್ಲಿ ನನ್ನದೇನು ತಪ್ಪಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ.  ಆದರೆ ಈ ಪ್ರಕರಣದಲ್ಲಿ ಸಿಎಂ ಅವರು ತಪ್ಪು ಮಾಹಿತಿ ಕೊಡುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಈ  ಪ್ರಕರಣವನ್ನು ಸಿಬಿಐಗೆ ಕೊಟ್ಟರೆ ಸತ್ಯ ಹೊರಬೀಳಲಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಒಂದೊಂದೆ ಹಗರಣಗಳು ಬಯಲಿಗೆ ಬರುತ್ತಿದ್ದ ಹಾಗೇ ದಿಕ್ಕು ತಪ್ಪಿಸಲು ಬಿಎಸ್‌ವೈ ವಿರುದ್ಧ ಹಳೆಯ ಪ್ರಕರಣಕ್ಕೆ ಮರು ಜೀವ ನೀಡಲಾಗುತ್ತಿದೆ.

ರಾಜ್ಯದಲ್ಲಿ ವಾಲ್ಮೀಕಿ ಹಗರಣ ಬಯಲಿಗೆ ಬಂತು. ಈಗ ಮುಡಾ ಹಗರಣ ಬಯಲಿಗೆ ಬಂದಿದೆ. ಇದನ್ನು ಮರೆಮಾಚಲು ಸರ್ಕಾರ ಈ ರೀತಿ ಮಾಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಹಚರರ ಮೇಲೆ ಜೈಲಿನಲ್ಲಿ ಗರಂ ಆದ ದರ್ಶನ್