Webdunia - Bharat's app for daily news and videos

Install App

ಬಿಜೆಪಿ ತೊರೆದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ

Webdunia
ಸೋಮವಾರ, 17 ಏಪ್ರಿಲ್ 2023 (08:28 IST)
ಬೆಂಗಳೂರು : ಸಾಕಷ್ಟು ರಾಜಕೀಯ ಹೈಡ್ರಾಮಾಗಳ ನಡುವೆ ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ‘ಕೈ’ ಹಿಡಿದರು.
 
ಕೆಪಿಸಿಸಿ ಕಚೇರಿಯಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರಿದರು. ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ  ಪಕ್ಷಕ್ಕೆ ಸ್ವಾಗತಿಸಿದರು. 

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಶೆಟ್ಟರ್ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. ಬಿಜೆಪಿ ಹಿರಿಯ ನಾಯಕರು ಮನವೊಲಿಸಲು ಎಷ್ಟೇ ಪ್ರಯತ್ನ ಮಾಡಿದರೂ ಹಠ ಬಿಡಲಿಲ್ಲ. ಕೊನೆಗೆ ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಸೋಮವಾರ ಬೆಳಗ್ಗೆ ಲಿಂಗಾಯತ ಸಮುದಾಯದ ನಾಯಕರೇ ಆಗ ಎಂ.ಬಿ.ಪಾಟೀಲ್ ಅವರು ಸ್ಕೈ ಗಾರ್ಡನ್ ಅಪಾರ್ಟ್ಮೆಂಟ್ಗೆ ತೆರಳಿ ಶೆಟ್ಟರ್ ಅವರನ್ನು ತಮ್ಮ ವಾಹನದಲ್ಲಿ ಕೆಪಿಸಿಸಿ ಕಚೇರಿಗೆ ಕರೆತಂದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್‌ ಹುದ್ದೆಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಬಿಜೆಪಿ ಟಿಕೆಟ್‌ ಪಡೆದ ದೇಬಾಶಿಶ್: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ವಿದೇಶದಲ್ಲಿ ಹೂಡಿಕೆ: ಸತೀಶ ಜಾರಕಿಹೊಳಿಯನ್ನು ಸಮರ್ಥಿಸಿದ ಪ್ರಿಯಾಂಕ್‌ ಖರ್ಗೆ

Video: ಮನೆ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಪತ್ನಿ: ಮದುವೆ ಮಾಡಿಸಿ ಪ್ರಬುದ್ಧತೆ ಮೆರೆದ ಪತಿರಾಯ

ಪರಪ್ಪನ ಅಗ್ರಹಾರದಲ್ಲೂ ಹಳೆ ಚಾಳಿ ಮುಂದುವರಿಸಿದ್ದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈನ್‌ನಲ್ಲಿ ಪತ್ತೆಯಾಯ್ತು ನೂರಾರು ಅಶ್ಲೀಲ ವಿಡಿಯೊ

ಜಾರಕಿಹೊಳಿ ಪರ ವಿಜಯ್ ಮಲ್ಯ ಬ್ಯಾಟಿಂಗ್‌: ಜಾರಿ ನಿರ್ದೇಶನಾಲಯದ ವಿರುದ್ಧ ಕಿಡಿಕಾರಿದ ವಿಲಾಸಿ ಉದ್ಯಮಿ

ಮುಂದಿನ ಸುದ್ದಿ
Show comments