Publish Date: Sun, 28 Apr 2024 (10:04 IST)
Updated Date: Sun, 28 Apr 2024 (10:07 IST)
ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರಾರ್ಥವಾಗಿ ಪ್ರಧಾನಿ ಮೋದಿ ಅವರು ಇಂದು ಕುಂದಾನಗರಿ ಬೆಳಗಾವಿಗೆ ಆಗಮಿಸಿದ್ದಾರೆ.
ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ಮುಖಂಡರು ಸ್ವಾಗತಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ಬಾಗಲಕೋಟೆ ಲೋಕಸಭೆ ಮತಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಎನ್‌ಡಿಎ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.