Select Your Language

Notifications

webdunia
webdunia
webdunia
webdunia

ದಸರಾ ಜಂಬೂಸವಾರಿ ಕ್ಷಣಗಣನೆ

ದಸರಾ ಜಂಬೂಸವಾರಿ ಕ್ಷಣಗಣನೆ
ಬೆಂಗಳೂರು , ಸೋಮವಾರ, 3 ಅಕ್ಟೋಬರ್ 2022 (15:15 IST)
ದಸರಾಕ್ಕೆ ಕಾಯುವುದು ಮಾಮೂಲಿ. ಸಡಗರ ಸಂಭ್ರಮದಿಂದಲೇ ಆರಂಭವಾಗುವ ದಸರಾ ಜಂಬೂ ಸವಾರಿಯೊಂದಿಗೆ ಮುಗಿದು ಹೋಗುತ್ತದೆ. ಇಷ್ಟು ವರ್ಷಗಳಲ್ಲಿ ನಡೆದ ದಸರಾಕ್ಕೆ ಹೋಲಿಸಿದರೆ ಈ ಬಾರಿಯ ದಸರಾವನ್ನು ಜನ ಸ್ವಾಗತಿಸಿದ ರೀತಿ ವಿಶೇಷವಾಗಿದೆ. ಏಕೆಂದರೆ ಎರಡು ವರ್ಷಗಳ ಕಾಲ ಕಾಡಿದ ಕೊರೋನಾ ದಸರಾ ಸಂಭ್ರಮವನ್ನು ನುಂಗಿ ಹಾಕಿತ್ತು.
ಈ ಬಾರಿಯ ದಸರಾದಲ್ಲಿ ಜನ ಮೈಕೊಡವಿಕೊಂಡು ಮನೆಯಿಂದ ಹೊರ ಬಂದಿದ್ದರ ಪರಿಣಾಮ ಎಲ್ಲೆಂದರಲ್ಲಿ ಜನವೋ ಜನ...
 
ಸಾಮಾನ್ಯವಾಗಿ ದಸರಾ ಎಂದರೆ ಜಗಮಗಿಸುವ ವಿದ್ಯುದ್ದೀಪದ ಅಲಂಕಾರ, ವಿವಿಧ ಕಾರ್ಯಕ್ರಮಗಳು, ಮೇಳಗಳು, ಕುಸ್ತಿ, ಆಟಗಳು, ವ್ಯಾಪಾರ ವಹಿವಾಟು, ಜನಜಂಗುಳಿ ಅಂತಿಮವಾಗಿ ಜಂಬೂಸವಾರಿ ಪಂಜಿನ ಕವಾಯತು ಮೂಲಕ ಮುಗಿದು ಹೋಗಿ ಬಿಡುತ್ತದೆ. ಆದರೆ ಸುಮಾರು 413 ವರ್ಷಗಳ ಕಾಲ ನಡೆದ ದಸರಾ ಆರಂಭದಿಂದ ಇಲ್ಲಿಯವರೆಗೆ ಮಗ್ಗುಲು ಬದಲಿಸಿಕೊಂಡು ಅವತ್ತಿನ ರಾಜವೈಭದಿಂದ ಇಂದಿನ ಪ್ರಜಾವೈಭವದವರೆಗೆ ಹತ್ತು ಹಲವು ಕಾರ್ಯಕ್ರಮಗಳ ಸೇರ್ಪಡೆಯೊಂದಿಗೆ ಜನಮನ ಸೆಳೆಯುತ್ತಾ ಬಂದಿದೆ.
ಮೈಸೂರು ದಸರಾದಲ್ಲಿ ಏನಿದೆ ಎಂದು ನೋಡುತ್ತಾ ಹೋದರೆ... ನಾಲ್ಕು ಶತಮಾನಗಳ ಇತಿಹಾಸದ ಹಿರಿಮೆ, ಸಾಂಸ್ಕೃತಿಕ ರಂಗುರಂಗಿನ ಗರಿಮೆ. ಬೆಡಗು ಭಿನ್ನಾಣದ ದಸರಾದಲ್ಲಿ ಒಂಭತ್ತು ದಿನಗಳ ಕಾಲ ನಡೆಯುವ ಸಾಂಸ್ಕೃತಿಕ ಸುಗ್ಗಿಯೊಂದಿಗೆ ಹಳ್ಳಿಗಳಿಂದ ಆರಂಭವಾಗಿ ಜಾಗತಿಕ ಜಗುಲಿಯ ಎತ್ತರಕ್ಕೆ ದಸರಾ ಬೆಳೆದು ನಿಂತಿರುವ ಜನಮನದ ಜನತಾ ದಸರಾದ ಬದಲಾವಣೆಗಳಿವೆ. ಮೈಸೂರು ದಸರಾವನ್ನು ಹೊಗಳಲು ಪದಗಳಿಲ್ಲ. ಚಾಮುಂಡೇಶ್ವರಿಯ ಒಂಭತ್ತು ಅವತಾರಗಳ ಪೂಜೆಯ ನಂತರ ಹತ್ತನೇ ದಿನದ "ವಿಜಯದಶಮಿ" ನಾಡ ಹಬ್ಬಕ್ಕೆ ಕಿರೀಟವಿಟ್ಟಂತೆ ನಡೆಯುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಜೆಸ್ಟಿಕ್ ಸುತ್ತ ಟ್ರಾಫಿಕ್ ಜಾಮ್.. ಕಾರಣ ನೋಡಿ