Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಶನಿ ಇದ್ದಂತೆ: ಜನಾರ್ದನ ಪೂಜಾರಿ

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಶನಿ ಇದ್ದಂತೆ: ಜನಾರ್ದನ ಪೂಜಾರಿ
ಮಂಗಳೂರು , ಸೋಮವಾರ, 30 ಜನವರಿ 2017 (14:11 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಂಕಾರ ಮಿತಿಮೀರಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಗುಡುಗಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾಗ ಹೋಗಳಿದ್ದೇನೆ. ಪಕ್ಷ ತೊರೆಯಬೇಡಿ ಎಂದು ಎಲ್ಲರಲ್ಲೂ ಮನವಿ ಮಾಡಿದ್ದೇನೆ ಎಂದರು.
 
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರಿ ನಷ್ಟವಾಗಿದ್ದು, ರಾಷ್ಟ್ರೀಯ ಮಟ್ಟದಲ್ಲೂ ದೊಡ್ಡ ಹೊಡೆದ ಆಗಲಿದೆ ಎಂದು ಎಚ್ಚರಿಕೆ ನೀಡಿದರು. 
 
ಎಸ್.ಎಂ.ಕೃಷ್ಣ ಅವರು ಮುತ್ಸದ್ದಿ, ಸಮಾಧಾನಿ, ಒಳ್ಳೆಯ ಮನುಷ್ಯ, ಅಂತಹ ವ್ಯಕ್ತಿಯನ್ನು ಪಕ್ಷ ನಡೆಸಿಕೊಂಡ ರೀತಿ ಸರಿಯಲ್ಲ ಎಂದು ಕಿಡಿಕಾರಿದರು. 
 
ರಾಜ್ಯದಲ್ಲಿರುವುದು ಕಾಂಗ್ರೆಸ್ ಸರಕಾರ ಅಲ್ಲ. ಇದು ಕುರುಬರ ಸರಕಾರ ಎಂದು ಕೆಲವರು ಕರೆದಿದ್ದಾರೆ. ಇದು ಸರಿಯಲ್ಲ. ಕೃಷ್ಣ ಅವರು ಭಾವನಾತ್ಮಕವಾಗಿ ಮಾತನಾಡಿದ್ದಾರೆ. ತಾಯಿಯನ್ನು ಬಿಟ್ಟು ಹೋಗುವ ವೇದನೆ ಅವರಲ್ಲಿ ಕಾಣುತ್ತಿತ್ತು. ಆದರೆ, ಪಕ್ಷ ತೊರೆದದ್ದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಫೋಸಿಸ್ ಕಚೇರಿಯಲ್ಲೇ ಟೆಕ್ಕಿಯ ಹತ್ಯೆ