Select Your Language

Notifications

webdunia
webdunia
webdunia
webdunia

ಹಿಲರಿ ಕ್ಲಿಂಟನ್ ಗೆಲುವಿಗೆ ಜನಾರ್ಧನ ಪೂಜಾರಿ ಪೂಜೆ

ಹಿಲರಿ ಕ್ಲಿಂಟನ್ ಗೆಲುವಿಗೆ ಜನಾರ್ಧನ ಪೂಜಾರಿ ಪೂಜೆ
Mangalore , ಭಾನುವಾರ, 6 ನವೆಂಬರ್ 2016 (14:23 IST)
ಮಂಗಳೂರು: ಅಮೆರಿಕ ಅಧ್ಯಕ್ಷ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಗೆಲುವಿಗಾಗಿ ರಾಜ್ಯ ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಮತ್ತು ಡೊನಾಲ್ಡ್ ಟ್ರಂಪ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇಬ್ಬರಲ್ಲಿ ಯಾರು ಗೆಲ್ಲುತ್ತಾರೆಂದು ವಿಶ್ವವೇ ಎದುರು ನೋಡುತ್ತಿದೆ. ಮೊದಲಿನಿಂದಲೂ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಪತ್ನಿ ಹಿಲರಿ ಕ್ಲಿಂಟನ್ ಅಧ್ಯಕ್ಷರಾಗಬೇಕೆಂದು ಪೂಜಾರಿ ಪೂಜೆ ಸಲ್ಲಿಸಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡಾ ಹಿಲರಿ ಕ್ಲಿಂಟನ್ ಗೆ ಬೆಂಬಲ ಸೂಚಿಸಿದ್ದರು. ಇವರೆಲ್ಲರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಪೂಜಾರಿ ತಮ್ಮ ಬೆಂಬಲಿಗರೊಂದಗೆ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿರೋಧಗಳ ನಡುವೆಯೇ ಟಿಪ್ಪು ಜಯಂತಿಗೆ ಸರ್ಕಾರದ ಸಿದ್ಧತೆ