ಜನಾರ್ಧನ ಪೂಜಾರಿ ಮನೆ ಮುಳುಗಡೆ : ಬೆಂಗಳೂರು-ಮಂಗಳೂರು ಸಂಪರ್ಕ ಬಂದ್

Webdunia
ಶನಿವಾರ, 10 ಆಗಸ್ಟ್ 2019 (17:36 IST)
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಆಗುತ್ತಿದೆ. ಬಂಟ್ವಾಳ್ ಬಾಗಶಃ  ಮುಳುಗಡೆ ಆಗಿದೆ.

ಬಂಟ್ವಾಳ್ ದಲ್ಲಿರುವ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರ ಮನೆ ಜಲಾವೃತವಾಗಿದ್ದು,  ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇದೇ ವೇಳೆ ಪಾಣೆ-ಮಂಗಳೂರು ಬಳಿ ವ್ಯಕ್ತಿಯೊಬ್ಬರು  ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳದ  ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ಮಾಜಿ ಸಚಿವ ಹಾಗೂ ಮಂಗಳೂರು ಶಾಸಕ ಯು. ಟಿ. ಖಾದರ್ ಉಳ್ಳಾಲದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆರೆಯಿಂದ  ತೊಂದರೆಗೊಳಗಾದ ಜನರಿಗೆ ನೆರವಿಗೆ ಧಾವಿಸಿದ್ದಾರೆ. ಇದೇ ವೇಳೆ ಗುರುಪುರ ಹಾಗೂ ಪಲ್ಗುಣಿ ನದಿ ನೀರಿನ ಮಟ್ಟ ಏರಿಕೆ ಆಗುವುದರಿಂದ ನದಿ ತೀರದ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮನವಿ ಮಾಡಿದ್ದಾರೆ.

ಶಿರಾಡಿ ಘಾಟ್, ಚಾರ್ಮಾಡಿ ಹಾಗೂ ಸಂಪಾಜೆ ಘಾಟ್ ರಸ್ತೆ ಬಂದ್ ಆಗಿರುವುದರಿಂದ ಮಂಗಳೂರು - ಬೆಂಗಳೂರು ಸಂಪರ್ಕ ಬಂದ್ ಆಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments