Publish Date: Sun, 11 Nov 2018 (17:09 IST)
Updated Date: Sun, 11 Nov 2018 (17:10 IST)
ಬೆಂಗಳೂರು: ಆಂಬಿಡೆಂಟ್ ಕಂಪನಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದೆ.
ನವಂಬರ್ 24 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲು ನ್ಯಾಯಾಲಯ ಆದೇಶ ನೀಡಿದೆ. ಅದರಂತೆ ಮತ್ತೆ ಗಣಿ ದಣಿ ಜೈಲು ಪಾಲಾಗಿದ್ದಾರೆ. ನಾಳೆ ಅವರಿಗೆ ಕೈದಿ ನಂಬರ್ ನೀಡುವ ಸಾಧ್ಯತೆಯಿದೆ.
ಇನ್ನು, ಜನಾರ್ಧನ ರೆಡ್ಡಿ ಬಂಧನದ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ‘ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರ ವಿರುದ್ಧ ಕಾನೂನೇ ಕ್ರಮ ಕೈಗೊಳ್ಳುತ್ತದೆ’ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.