ಜಂತಕಲ್ ಮೈನಿಂಗ್ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನ ಎಸ್ಐಟಿ ವಿಶೇಷ ಕೋರ್ಟ್, ಕುಮಾರಸ್ವಾಮಿಯವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಕಳೆದ 2006ರಲ್ಲಿ ನಡೆದ ಜಂತಕಲ್ ಮೈನಿಂಗ್ ಗುತ್ತಿಗೆ ಪ್ರಕರಣದಲ್ಲಿ ಕುಮಾರಸ್ವಾಮಿಯವರಿಗೆ 150 ಕೋಟಿ ಲಂಚ ನೀಡಲಾಗಿದೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಪಿಸಿದ್ದರು.
ಕುಮಾರಸ್ವಾಮಿ ವಿರುದ್ಧದ ಆರೋಪಕ್ಕೆ ಪೂರಕವಾಗಿ ದಾಖಲೆಗಳನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡ, ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಸಲ್ಲಿಸುವಂತೆ ಕೋರಿತ್ತು. ಶೀಘ್ರದಲ್ಲಿಯೇ ಎಸ್‌ಐಟಿಗೆ ದಾಖಲೆಗಳನ್ನು ಸಲ್ಲಿಸುತ್ತೇನೆ ಎಂದು ಜನಾರ್ದನ ರೆಡ್ಡಿ ತಿಳಿಸಿದ್ದನ್ನು ಸ್ಮರಿಸಬಹುದು.
ಜಂತಕಲ್ ಮೈನಿಂಗ್ ಪರವಾನಿಗಿ ಲೈಸೆನ್ಸ್ ನವೀಕರಿಸುವ ಸಂದರ್ಭದಲ್ಲಿ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದೇನೆಯೇ ಹೊರತು ಪ್ರಕರಣದಲ್ಲಿ ನಾನು ನೇರ ಆರೋಪಿಯಲ್ಲ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.