Daily Horoscope
✕

ಜಾರಕಿಹೊಳಿ ಸಿಡಿ ಪ್ರಕರಣ : ವಿಚಾರಣೆ ಮುಂದಕ್ಕೆ

Webdunia
ಬುಧವಾರ, 15 ಸೆಪ್ಟಂಬರ್ 2021 (08:29 IST)
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿತು.
Photo Courtesy: Google

ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರ ಹೊರಡಿಸಿದ ಆದೇಶ ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು.
ಈ ವೇಳೆ ಯುವತಿ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹಾಜರಾಗಿ, ಅರ್ಜಿ ವಿಚಾರಣೆಯನ್ನು ಒಂದು ದಿನ ಮುಂದೂಡಬೇಕು ಎಂದು ಮನವಿ ಮಾಡಿದರು.
ಈ ಮಧ್ಯೆ, ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದಿಸಿ, ತನಿಖೆ ಆರಂಭವಾದ ಬಳಿಕ ಸಿಆರ್ಪಿಸಿ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದರಂತೆ ತನಿಖೆ ಮುಕ್ತಾಯವಾದ ನಂತರ ನ್ಯಾಯಾಲಯಕ್ಕೆ ವರದಿ ಸಲ್ಲಿಸ ಬೇಕಾಗುತ್ತದೆ. ಈಗಾಗಲೇ ಪ್ರಕರಣದ ತನಿಖೆ ಮುಕ್ತಾಯಗೊಂಡಿದೆ. ಆದ್ದರಿಂದ ತನಿಖೆಯ ಅಂತಿಮ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಕರಣ ಕುರಿತ ಎಸ್ಐಟಿ ತನಿಖೆಯನ್ನೇ ಯುವತಿ ಪ್ರಶ್ನೆ ಮಾಡಿದ್ದಾರೆ. ಹೀಗಾಗಿ, ಅವರ ವಾದವೂ ಆಲಿಸಬೇಕಿದೆ ಎಂದು ತಿಳಿಸಿ, ಯುವತಿ ಪರ ವಕೀಲರ ಮನವಿಯಂತೆ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments