Publish Date: Thu, 08 Feb 2018 (10:23 IST)
Updated Date: Thu, 08 Feb 2018 (10:27 IST)
ಬೆಂಗಳೂರು : ವಿಧಾನ ಸಭಾ ಚುನಾವಣಿ ಸಮಿಪಿಸುತ್ತಿದ್ದಂತೆ ರಾಜಕೀಯ ಮುಖಂಡರು ತಮ್ಮ ಕ್ಷೇತ್ರಗಳ ಟಿಕೆಟ್‍ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡುತ್ತಿದ್ದಾರೆ. ಹಾಗೇ ಪರಿಷತ್ ಸದಸ್ಯೆ ಜಯಮಾಲಾ ಅವರು ಕೂಡ ಟಿಕೆಟ್‍ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ ಸ್ಪರ್ಧಿಸದೇ ಇದ್ದರೆ ಸಾಗರ ಕ್ಷೇತ್ರದ ಟಿಕೆಟ್ ತಮಗೆ ನೀಡಬೇಕೆಂದು ಪರಿಷತ್ ಸದಸ್ಯೆ ಜಯಮಾಲ ಅವರು ಹೈಕಮಾಂಡ್ ಮುಂದೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಕಾಗೋಡು ತಿಮ್ಮಪ್ಪ ಅವರ ಬದಲಾಗಿ ಅವರ ಪುತ್ರಿಗೆ ಸಾಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗುತ್ತಿದೆ ಎಂಬ ಸುದ್ದಿ ಕಾಂಗ್ರೆಸ್ ಅಂಗಳದಲ್ಲಿ ಹರಿದಾಡುತ್ತಿವೆ. ಈ ನಡುವೆ ಜಯಮಾಲಾ ಸಾಗರ ಅಖಾಡಕ್ಕೆ ಎಂಟ್ರಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ