Publish Date: Mon, 21 Jan 2019 (18:42 IST)
Updated Date: Mon, 21 Jan 2019 (18:43 IST)
ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯಿಂದ ಸೋಮವಾರ ಇಲ್ಲಿನ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಮಾರಂಭ ಆಯೋಜಿಸಲಾಗಿತ್ತು.
ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಡಾ.ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ಪ್ರಯುಕ್ತ ರಾಜ್ಯ ಸರ್ಕಾರವು ಸೋಮವಾರದಿಂದಲೆ ಜಾರಿಗೆ ಬರುವಂತೆ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು, ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಗಳು ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆಯೂ ಮಾಡಲಾಯಿತು.
ತೊನಸನಹಳ್ಳಿ ಎಸ್. ಗ್ರಾಮದ ಅಲ್ಲಮಪ್ರಭು ಪೀಠಾಧಿಪತಿ ಪೂಜ್ಯ ಮಲ್ಲಣ್ಣಪ್ಪ ಮಹಾಸ್ವಾಮಿ ಅವರ ಸಾನಿಧ್ಯದಲ್ಲಿ ಸಮಾರಂಭ ಜರುಗಿತು.