ಕುಟುಕು ಕಾರ್ಯಾಚರಣೆಯಲ್ಲಿ ಬಸವಕಲ್ಯಾಣ ಶಾಸಕ ಮಲ್ಲಿಕಾರ್ಜುನ್ ಖೂಬಾ ರಾಜ್ಯಸಭೆಯಲ್ಲಿ ಮತದಾನ ಮಾಡಲು ಹಣ ಕೇಳಿರುವುದರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ ಅವರು ಯಾವ ತಪ್ಪು ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕುಟುಕು ಕಾರ್ಯಾಚರಣೆ ನಡೆಯುತ್ತಿದೆ ಎನ್ನುವುದು ಶಾಸಕ ಖೂಬಾ ಅವರಿಗೆ ಗೊತ್ತಿತ್ತು. ಆದ್ದರಿಂದ ಅವರ ವಿರುದ್ಧ ಜೆಡಿಎಸ್ ಪಕ್ಷ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದರು.
ಶಾಸಕ ಖೂಬಾ ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ನಾನು ಅವರ ಪರವಾಗಿ ನಿಲ್ಲುತ್ತೇನೆ ಎಂದು ಘೋಷಿಸಿದರು.
ಇಂಡಿಯಾ ಟುಡೇ ನಡೆಸಿದ ಸ್ಟಿಂಗ್ ಆಪರೇಶನ್‌ನಲ್ಲಿ ಶಾಸಕ ಖೂಬಾ ಐದು ಕೋಟಿ ರೂಪಾಯಿಗಳಿಗೆ ಬೇಡಿಕೆಯಿಟ್ಟಿರುವುದು ಸ್ಪಷ್ಟವಾಗಿ ದಾಖಲಾಗಿದ್ದರಿಂದ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೇಂದ್ರ ಚುನಾವಣೆ ಆಯೋಗ ಆದೇಶ ನೀಡಿದೆ
ಇದಕ್ಕಿಂತ ಮೊದಲು ಸ್ಟಿಂಗ್ ಆಪರೇಶನ್‌ನಲ್ಲಿ ಪಾಲ್ಗೊಂಡಿರುವ ಜೆಡಿಎಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭರವಸೆ ನೀಡಿದ್ದರು ಎನ್ನಲಾಗಿದೆ. ಇದೀಗ ಕುಮಾರಸ್ವಾಮಿ ಉಲ್ಟಾ ಹೊಡೆದಿದ್ದಾರೆ.
ಬಸವಕಲ್ಯಾಣ ಶಾಸಕ ಮಲ್ಲಿಕಾರ್ಜುನ್ ಖೂಬಾ ತಮ್ಮ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದು ಚುನಾವಣೆ ಆಯೋಗದ ಆದೇಶ ಹೊರಬಿದ್ದ ನಂತರ ಅವರು ಕಾಣೆಯಾಗಿದ್ದಾರೆ. ರಾಜ್ಯಸಭೆಗೆ ಜೂನ್ 11 ರಂದು ಮತದಾನ ನಡೆಯಲಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ