Webdunia - Bharat's app for daily news and videos

Install App

ಮಾಜಿ ಪ್ರಧಾನಿ ದೇವೆಗೌಡರಿಗೆ ಸರ್ಕಾರ ಅವಮಾನ ಮಾಡಿದೆ ಎಂದು ಕಿಡಿಕಾರಿದ ಜೆಡಿಎಸ್

Webdunia
ಶುಕ್ರವಾರ, 11 ನವೆಂಬರ್ 2022 (19:07 IST)
ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಪ್ರತಿಮೆ ಲೋಕಾರ್ಪಣೆ ಸಮಾರಂಭಕ್ಕೆ ಅದೇ ಪ್ರಧಾನಿಗಳಿಗೆ ಆಹ್ವಾನ ಮಾಡಲಿಲ್ಲ, ಯಾಕೆ? ಎಂದು ಜೆಡಿಎಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಯ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಅಂದು ಆಹ್ವಾನಿಸಿದ್ದ ಬಿಜೆಪಿ ಸರಕಾರ, ಪ್ರತಿಮೆ ಲೋಕಾರ್ಪಣೆಗೆ ಮಾಜಿ ಪ್ರಧಾನಿ ದೇವೆಗೌಡರಿಗೆ ಆಹ್ವಾನ ಮಾಡಲಿಲ್ಲ ಯಾಕೆ? ಎಂದು ಜೆಡಿಎಸ್ ಪ್ರಶ್ನಿಸಿದೆ. ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ ಹೆಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments