ಜೆಡಿಎಸ್ ಮುಖಂಡನ ಬರ್ಬರ ಹತ್ಯೆ

Webdunia
ಮಂಗಳವಾರ, 13 ನವೆಂಬರ್ 2018 (19:46 IST)
ಆಸ್ಪತ್ರೆ ಬಳಿ ಬಳಿ ಟೀ ಕುಡಿಯುತ್ತಿದ್ದ ವೇಳೆ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಜೆಡಿಎಸ್ ಮುಖಂಡರೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಜೆಡಿಎಸ್ ಪಕ್ಷದ ರಾಜ್ಯ ಪರಿಶಿಷ್ಟ ಜಾತಿ ವರ್ಗ(ಎಸ್ಸಿ,ಎಸ್ಟಿ) ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಟಿ ರಾಜಗೋಪಾಲ್ ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಕನಕಪುರ ನಗರ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.

ರಾಮನಗರ ಜಿಲ್ಲೆಯ ಪಿ.ರಾಂಪುರದ ರಾಜಗೋಪಾಲ್ ಕನಕಪುರದಲ್ಲಿ ವಾಸಿಸುತ್ತಿದ್ದು ಸಂಜೆ ಕನಕಪುರದ ರಾಮನಗರ ರಸ್ತೆಯಲ್ಲಿನ ಜನನಿ ಆಸ್ಪತ್ರೆ ಬಳಿ ಬಳಿ ಟೀ ಕುಡಿಯುತ್ತಿದ್ದ ವೇಳೆ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕುತ್ತಿಗೆ ಹಾಗೂ ಎದೆ ಭಾಗಕ್ಕೆ ಇರಿದು, ಕೊಚ್ಚಿ ಕೊಲೆ ಮಾಡಿದ್ದಾರೆ.

ರಾಜ್ಗೋಪಾಲ್ ಅವರು ಟೀ ಕುಡಿಯಲು ಬರುವ ಮುನ್ನ ಕೆಲವರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು ಸ್ಥಳಿಯರು ಗಲಾಟೆ ಬಿಡಿಸಿ ಎಲ್ಲರನ್ನೂ ಸಮಾಧಾನ ಪಡಿಸಿ ಕಳುಹಿಸಿದ್ದರು. ನಂತರ ಜನನಿ ಆಸ್ಪತ್ರೆಯ ಬಳಿ ರಾಜ್ಗೋಪಾಲ್ ಟೀ ಕುಡಿಯಲು ಆಗಮಿಸಿದ್ದರು. ವೇಳೆ ರಾಜ್ಗೋಪಾಲರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಗಣರಾಜ್ಯೋತ್ಸವ ಪೆರೇಡ್ ಗೆ ಪುರುಷರ ಸಿಆರ್ ಪಿಎಫ್ ತುಕಡಿಗೆ ಮಹಿಳಾ ಸಾರಥಿ: ಸಿಮ್ರನ್ ಯಾರು

ಜನಾರ್ಧನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: ಅರೆಸ್ಟ್ ಆದವರು ಯಾರು ಗೊತ್ತಾ

ವಿಬಿ ರಾಮ್ ಜಿ ಯೋಜನೆಗೆ ಆಂಧ್ರಪ್ರದೇಶಕ್ಕೂ ಆತಂಕ: ಸಿದ್ದರಾಮಯ್ಯ ಬಾಂಬ್ ಗೆ ಅಲ್ಲಾಡುತ್ತಾ ಎನ್ ಡಿಎ

ಮುಂದಿನ ಸುದ್ದಿ
Show comments