ಬಿಜೆಪಿ ಹಣದ ಹೊಳೆ ಹರಿಸಿದ ಪರಿಣಾಮ ಜೆಡಿಎಸ್ ಸೋತಿದೆ : ಕುಮಾರಸ್ವಾಮಿ

Webdunia
ಶುಕ್ರವಾರ, 19 ಮೇ 2023 (10:10 IST)
ರಾಮನಗರ : ಬಿಜೆಪಿಯು ಜೆಡಿಎಸ್ ಅನ್ನು ಮುಗಿಸಬೇಕು ಎನ್ನುವ ನಡವಳಿಕೆ ಹಾಗೂ ಹಣದ ಹೊಳೆ ಹರಿಸಿದ ಪರಿಣಾಮ ಜೆಡಿಎಸ್ ಸೋತಿದೆ ಎಂದು ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ಗೆ ಹೀನಾಯ ಸೋಲು ವಿಚಾರದ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೃತಜ್ಞತಾ ಸಭೆಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳ ಕೊಡ್ತಾರಾ ಎಂಬ ವಿಚಾರ ಸಂಬಂಧ ಪ್ರತಿಕ್ರಿಯಿಸಿದರು.
ನೋಡೋಣ, ನಮಗಿಂತ ಅವರು ದೊಡ್ಡವರಲ್ವೆ. ಎಲ್ಲಾ ಲೆಕ್ಕಾಚಾರ ಮಾಡಿಯೇ ಸ್ಕೀಂ ಮಾಡಿರುತ್ತಾರೆ. ಮೊದಲು ಫ್ರೀ ಅಂತ ಹೇಳಿ ಈಗ ಕೆಲವೊಂದು ಷರತ್ತು ಹಾಕ್ತಿದ್ದಾರೆ. ನೋಡೋಣ ಮುಂದೆ ಏನ್ ಮಾಡ್ತಾರೆ ಅಂತ ಎಂದರು. 

ಇದೇ ವೇಳೆ ಚುನಾವಣಾ ಸೋಲಿನ ಪರಾಮರ್ಶೆ ವಿಚಾರ ಮಾತನಾಡಿ, ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ನಿಲ್ಲುತ್ತೇವೆ. ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ. ನಾನು ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ. ಪಂಚರತ್ನ ಯೋಜನೆಗಳು ಜನರಿಗೆ ಹಿಡಿಸಲಿಲ್ಲ ಅನ್ಸುತ್ತೆ.

ಕಾಂಗ್ರೆಸ್ನ ಗ್ಯಾರಂಟಿಗಳ ನಂಬಿ ಮತಹಾಕಿದ್ದಾರೆ. ಪಕ್ಷದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಏನೆಲ್ಲಾ ಆಗಿದೆ ಅನ್ನೋದರ ಬಗ್ಗೆ ಮಾಹಿತಿ ಕಲೆ ಹಾಕುತ್ತೇನೆ. ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ. ದೇವೇಗೌಡರು ಎರಡು ಬಾರಿ ಸೋತ ಬಳಿಕವೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿತ್ತು. ಜನ ಮುಂದಿನ ದಿನಗಳಲ್ಲಿ ಮತ್ತೆ ಜೆಡಿಎಸ್ ಬೇಕು ಅಂತ ಬಯಸ್ತಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಮುಂದಿನ ಸುದ್ದಿ
Show comments