Select Your Language

Notifications

webdunia
webdunia
webdunia
webdunia

ಜೆಡಿಎಸ್-ಬಿಜೆಪಿ ಮೈತ್ರಿ: ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದ ಸಿಎಂ

ಜೆಡಿಎಸ್-ಬಿಜೆಪಿ ಮೈತ್ರಿ: ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದ ಸಿಎಂ
ಮೈಸೂರು , ಮಂಗಳವಾರ, 31 ಮೇ 2016 (15:42 IST)
ರಾಜ್ಯಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂತಹ ಬೆದರಿಕೆಗಳಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಕುರಿತು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಚರ್ಚೆ ನಡೆಸಲಿದ್ದು, ಇಂತಹ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ ಎಂದು ಹೇಳಿದ್ದಾರೆ.
 
ಅವರು ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಸಲಿ, ನಾವು ರಾಜ್ಯಸಭೆಗೆ ಮೂರನೇಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ನಮ್ಮ ಪಕ್ಷದ ಅಭ್ಯರ್ಥಿಗಳು ಜಯಭೇರಿಯಾಗುತ್ತಾರೆ ಎಂದು ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಆನಂದಿ ಬೆನ್ ಬದಲಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಅಮಿತ್ ಶಾ?