Webdunia - Bharat's app for daily news and videos

Install App

ಹುಬ್ಬಳ್ಳಿ ನೇಹಾ ಹತ್ಯೆಗೆ ರಾಜ್ಯಸರ್ಕಾರದ ತುಷ್ಠೀಕರಣ ಮನೋಭಾವವೇ ಕಾರಣ: ಜೆಡಿಎಸ್ ಆರೋಪ

Krishnaveni K
ಶುಕ್ರವಾರ, 19 ಏಪ್ರಿಲ್ 2024 (16:26 IST)
Photo Courtesy: Twitter
ಬೆಂಗಳೂರು: ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಜಾತ್ಯತೀತ ಜನತಾದಳ ಆರೋಪಿಸಿದೆ.
 
 
ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪಕ್ಷವು; ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದೆ.
 
 
ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್  ಸರಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.
 
 
ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಪರಮ ಪಾಪಿಯನ್ನು ಸುಮ್ಮನೆ ಬಿಡಬಾರದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರಕಾರ ಕಟ್ಟೆಚ್ಚರ ವಹಿಸಬೇಕು. ಆ ನತದೃಷ್ಟ ವಿದ್ಯಾರ್ಥಿನಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜೆಡಿಎಸ್ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ