ಬೆಂಗಳೂರು : ಬೈಎಲೆಕ್ಷನ್ ನಲ್ಲಿ ಜೆಡಿಎಸ್ ನವರು ಅಭ್ಯರ್ಥಿ ಹಾಕುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತಮಿಳುನಾಡಿನಲ್ಲಿ ಉಪಚುನಾವಣೆಗೆ ಅಭ್ಯರ್ಥಿ ಹಾಕಿದ್ರಾ? ಎಂದು ಪ್ರಶ್ನಿಸಿದ ಅವರು, ಜೆಡಿಎಸ್ ನವರು ಅಭ್ಯರ್ಥಿ ಹಾಕುವ ಅವಶ್ಯಕತೆ ಇರಲಿಲ್ಲ. ಬೈಎಲೆಕ್ಷನ್ ನಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಾರದಿತ್ತು ಎಂದು ಹೇಳಿದ್ದಾರೆ.
ಹಾಗೇ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿಯನ್ನು ಬೆಂಬಲಿಸಬೇಕಿತ್ತು. ವಿರೋಧ ಪಕ್ಷಗಳು ಸರ್ಕಾರವನ್ನು ಬೆಂಬಲಿಸಬೇಕು. ಅದೇರೀತಿ ಸರ್ಕಾರ ವಿಪಕ್ಷಗಳಿಗೆ ಮರ್ಯಾದೆ ಕೊಡಬೇಕು ಎಂದು ಅವರು ತಿಳಿಸಿದ್ದಾರೆ.