Publish Date: Wed, 23 Oct 2019 (14:28 IST)
Updated Date: Wed, 23 Oct 2019 (14:33 IST)
ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರೋ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪಿಎಸ್ ಐ ಬಾಪುಗೌಡ ಅಮಾನತ್ತಿಗೆ ಒತ್ತಾಯ ಮಾಡಲಾಗುತ್ತಿದೆ.
ಯಾದಗಿರಿಯಲ್ಲಿ ನಡೆಯುತ್ತಿರೋ ಪ್ರತಿಭಟನೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಾಥ್ ನೀಡಲಿದ್ದಾರೆ.
ಪ್ರತಿಭಟನೆ ಸ್ಥಳದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಮಾಡಲಾಗಿದೆ. ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಪೊಲೀಸರ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.