Publish Date: Wed, 01 May 2019 (18:51 IST)
Updated Date: Wed, 01 May 2019 (18:53 IST)
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡಬೇಕಿತ್ತು. ಮೈತ್ರಿಯಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.
ಜೆಡಿಎಸ್- ಕಾಂಗ್ರೆಸ್ ಜಿದ್ದಾಜಿದ್ದಿನ ಚುನಾವಣೆ ನಡೆಸಿದ್ದವು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಜೆಡಿಎಸ್‌ನವರು ಬಿಜೆಪಿಗೆ ವೋಟ್ ಹಾಕಿದ್ದಾರೆ.
ಉದ್ಬೂರು ಗ್ರಾಮ ಪಂಚಾಯಿತಿ ಸೇರಿದಂತೆ ಕೆಲವು ಕಡೆ ಹೀಗಾಗಿದೆ ಅಂತ ಮೈಸೂರಿನಲ್ಲಿ ಜಿ.ಟಿ.ದೇವೇಗೌಡ ಹೇಳಿಕೆ ನೀಡಿದ್ದಾರೆ. ಮೈತ್ರಿ ಹಿನ್ನೆಡೆ ಒಪ್ಪಿಕೊಂಡಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು.
ಇದಕ್ಕೆ ಬಿಜೆಪಿ ಪ್ರತಿಕ್ರಿಯಿಸಿದ್ದು, ನಿಜ, ಸಚಿವ ಜಿ.ಟಿ.ದೇವೇಗೌಡರು ನಿಜ ಒಪ್ಪಿಕೊಂಡಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ. ಇದನ್ನು ಬಹಿರಂಗವಾಗಿ ಜಿ.ಟಿ.ದೇವೇಗೌಡ ಒಪ್ಪಿಕೊಂಡಿರೋದರಿಂದ ತಮ್ಮ ಸೋಲನ್ನ ತಾವೇ ಒಪ್ಪಿಕೊಂಡಿದ್ದಾರೆ. ಹೀಗಂತ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.
Jagadeesh
Publish Date: Wed, 01 May 2019 (18:51 IST)
Updated Date: Wed, 01 May 2019 (18:53 IST)