Publish Date: Tue, 26 Mar 2019 (10:13 IST)
Updated Date: Tue, 26 Mar 2019 (10:15 IST)
ವಿಜಯಪುರ : ಜೆಡಿಎಸ್ ತಾನೂ ಹಾಳಾಗುತ್ತೆ, ಕಾಂಗ್ರೆಸ್ಸನ್ನೂ ಹಾಳು ಮಾಡುತ್ತಿದೆ ಎಂದು ಬಿಜೆಪಿ ಮುಖಂಡ, ಸಂಸದ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸಲು ದೇವೇಗೌಡರು ಭಾರಿ ಟ್ರಾಪ್ ಮಾಡಿದ್ದಾರೆ. ದೇವೇಗೌಡರಿಗೆ ದೃತರಾಷ್ಟ್ರ ಮೋಹ ಶುರುವಾಗಿದೆ. ಅವರ ಮಕ್ಕಳು, ಮೊಮ್ಮಕ್ಕಳ ಮೋಹದಲ್ಲಿ ಕಾಂಗ್ರೆಸ್‍ನಂತಹ ಕೌರವ ಕುಲ ಹಾಳಾಗುತ್ತೆ. ಜೆಡಿಎಸ್ ತಾನೂ ಹಾಳಾಗುತ್ತೆ, ಕಾಂಗ್ರೆಸ್ಸನ್ನೂ ಹಾಳು ಮಾಡುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ಸನ್ನ ಮುಗಿಸಲು ಕೆಲ ಕೈ ನಾಯಕರೇ ರೆಡಿಯಾಗಿದ್ದಾರೆ. ಇದರಲ್ಲಿ ಕೆಲ ಕಾಂಗ್ರೆಸ್ ರಾಜ್ಯ ನಾಯಕರು ಕೂಡ ಭಾಗಿಯಾಗಿದ್ದಾರೆ. ಇಷ್ಟರಲ್ಲೆ ಅವರ ಹೆಸರುಗಳು ಮಾಧ್ಯಮಗಳ ಮೂಲಕವೇ ಹೊರ ಬೀಳಲಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ತನ್ನಿಂದ ತಾನೇ ಆಗಲಿದೆ. ಈ ಚುನಾವಣೆ ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲು ದೊಡ್ಡ ಮುನ್ನುಡಿಯನ್ನ ಬರೆಯಲಿದೆ ಎಂದು ವ್ಯಂಗ್ಯವಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.