ಶಾಸಕ ಜಮೀರ್ ಅಹ್ಮದ್ ಸೇರಿದಂತೆ ಪಕ್ಷದ ಭಿನ್ನಮತಿಯರು ಪಕ್ಷದಿಂದ ಹೊರ ಹೋಗುವುದಾದರೆ ಹೋಗಲಿ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ, ಶಾಸಕರಾದ ಜಮೀರ್ ಅಹ್ಮದ್, ಚಲುವರಾಯಸ್ವಾಮಿ ಸೇರಿದಂತೆ ಪಕ್ಷದ ಭಿನ್ನಮತಿಯರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಾದರೆ ಹೋಗಲಿ. ಈಗಾಗಲೇ ರಾಜ್ಯಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜೂನ್ 12ರಂದು ಪಕ್ಷ ನಿಷ್ಠೆ ಹೊಂದಿರುವ ಶಾಸಕರ ಸಭೆ ಕರೆದಿದ್ದಾರೆ. ಈಗಾಗಲೇ ವಿಧಾನ ಪರಿಷತ ಚುನಾವಣೆಗೆ ಮತದಾನ ನಡೆಯುತ್ತಿದ್ದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆತ್ಮಸಾಕ್ಷಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಶಾಸಕರು ಯಾರಿಗೆ ಬೆಂಬಲ ಸೂಚಿಸುತ್ತಾರೆ ನೋಡೋಣ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ