Publish Date: Tue, 09 Oct 2018 (09:57 IST)
Updated Date: Tue, 09 Oct 2018 (09:58 IST)
ಬೆಂಗಳೂರು: ಈ ವರ್ಷ ಅಂತ್ಯ ನಡೆಯಲಿರುವ ಲೋಕಸಭೆ ಚುನಾವಣೆಗೆ ಮೊದಲು ತೆರವಾದ ಸ್ಥಾನಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಟಿಕೆಟ್ ಗಾಗಿ ರಾಜಕೀಯ ಪಕ್ಷದಲ್ಲಿ ಪೈಪೋಟಿ ಶುರುವಾಗಿದೆ.
ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ಹೆಚ್ಚಿದೆ. ಇದು ಜೆಡಿಎಸ್ ನ ಭದ್ರಕೋಟೆಯಾಗಿದ್ದು, ಇಲ್ಲಿ ನಿಂತ ಅಭ್ಯರ್ಥಿಗಳಿಗೆ ಗೆಲುವು ಸುಗಮ ಎನ್ನುವುದು ನಾಯಕರ ಲೆಕ್ಕಾಚಾರ. ಈ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಸಭೆ ನಡೆಸಲಿದ್ದು, ಅದಾದ ಬಳಿಕ ಮೂರು ದಿನಗಳೊಳಗೆ ಜೆಡಿಎಸ್ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ ನಲ್ಲೂ ಉಪಚುನಾವಣೆ ಚಟುವಟಿಕೆಗಳು ಗರಿಗೆದರಿದ್ದು, ಇಂದು ಕೈ ನಾಯಕರು ಸಭೆ ಸೇರಿ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಿದ್ದಾರೆ. ಅತ್ತ ಬಿಜೆಪಿಗೂ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.