Webdunia - Bharat's app for daily news and videos

Install App

ವಿ.ಪರಿಷತ್, ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ: ಜೆಡಿಎಸ್ ಶಾಸಕಾಂಗ ಸಭೆ

Webdunia
ಗುರುವಾರ, 26 ಮೇ 2016 (14:32 IST)
ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲು ತುಮಕೂರು ರಸ್ತೆಯಲ್ಲಿರುವ ಗೊಲ್ಡನ್ ಪಾಮ್ ರೆಸಾರ್ಟ್‌‌ನಲ್ಲಿ ರಾಜ್ಯ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದೆ.
 
ಇಂದು ಮಧ್ಯಾಹ್ನ ಮೂರು ಗಂಟೆಗೆ ತುಮಕೂರು ರಸ್ತೆಯಲ್ಲಿರುವ ಗೊಲ್ಡನ್ ಪಾಮ್ ರೆಸಾರ್ಟ್‌‌ನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
 
 ಈ ಸಭೆಯಲ್ಲಿ ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಕುರಿತು ಚರ್ಚೆ ನಡೆಯುವುದರ ಜೊತೆಗೆ ರಾಜ್ಯಸಭೆಗೆ ಕನ್ನಡಿಗರನ್ನು ಆಯ್ಕೆ ಮಾಡುವ ಕುರಿತು ಪ್ರಮಖವಾಗಿ ಚರ್ಚೆ ನಡೆಯಲಿದೆ. 
 
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್‌ ಪಕ್ಷದ ಬಂಡಾಯ ಶಾಸಕರಾದ ಜಮೀರ್ ಅಹ್ಮದ್ ಮತ್ತು ಚೆಲುವರಾಯ ಸ್ವಾಮಿ ಮಾಗಡಿ ಶಾಸಕ ಬಾಲಕೃಷ್ಣರವರ ಮನವೊಲಿಸಲು ಪ್ರಯತ್ನಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments