ಸಿಎಂ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ ಗರಂ ಆಗಿದ್ಯಾಕೆ?

ಸೋಮವಾರ, 11 ಫೆಬ್ರವರಿ 2019 (14:01 IST)
ತುಮಕೂರು : ಬಜೆಟ್ ನಲ್ಲಿ ಗುಬ್ಬಿ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಘೋಷಣೆಯಾಗದಿದದ್ದಕ್ಕೆ ಸಿಎಂ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ ಸಣ್ಣಕೈಗಾರಿಕಾ ಸಚಿವ ಎಸ್.ಆರ್ ಶ್ರೀನಿವಾಸ್ ಅವರು ಕಿಡಿಕಾರಿದ್ದಾರೆ.

ಈ ಕುರಿತು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ವಿವಿಧ ಯೋಜನೆಗಳಿಗೆ ಸುಮಾರು 400 ಕೋಟಿ ರೂ ಬೇಡಿಕೆ ಇಟ್ಟಿದ್ದೆ. ಆದ್ರೆ ಬಸವಬೃಂಗ ಮಠಕ್ಕೆ 1 ಕೋಟಿ ಅನುದಾನ ಘೋಷಣೆ ಮಾಡಿರುವುದು ಬಿಟ್ಟರೆ ಇನ್ನು ಯಾವುದೇ ಘೋಷಣೆ ಆಗಿಲ್ಲ. ಇದರಿಂದ ನನಗೆ ನೋವಾಗಿದೆಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

‘ಹೇಮಾವತಿಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಬೇಡಿಕೆ ಇಟ್ಟಿದ್ದೆ. ಅದೂ ಕೈಗೂಡಲಿಲ್ಲ. ಇದರ ಪರಿಣಾಮ ನಾನು ಅನುಭಿಸಬೇಕಾಗುತ್ತದೆ. ಮುಂದಿನ ದಿನದಲ್ಲಿ ಅದರ ಪರಿಣಾಮ ಜನ ನನಗೆ ಕಲಿಸ್ತಾರೆ’ ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸದನದಿಂದ ಶಿವನಗೌಡ, ರೇಣುಕಾಚಾರ್ಯ ಎದ್ದು ಹೊರ ನಡೆದದ್ಯಾಕೆ?