Publish Date: Thu, 25 May 2017 (12:55 IST)
Updated Date: Thu, 25 May 2017 (12:57 IST)
ಜಿಲ್ಲೆಯಲ್ಲಿ ನನ್ನನ್ನು ಕಡೆಗೆಣಿಸಲಾಗಿರುವುದಕ್ಕೆ ಬೇಸರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಸಾ.ರಾ.ಮಹೇಶ್ ವಿರುದ್ಧ ಭಿನ್ನಮತದ ಕಹಳೆ ಮೊಳಗಿಸಿದ್ದಾರೆ.
ಪಕ್ಷದ ಸಭೆಯ ಕುರಿತು ಮಾಹಿತಿ ನೀಡುತ್ತಿಲ್ಲ. ಮೇಯರ್ ವಿಚಾರದಲ್ಲೂ ನನ್ನ ಅಭಿಪ್ರಾಯ ಪಡೆದಿಲ್ಲ ಈ ಕುರಿತು ದೇವೇಗೌಡರೊಂದಿಗೆ ಮಾತನಾಡಿದ್ದೇನೆ. ಜೂನ್ 16 ರಂದು ದೇವೇಗೌಡರಿಗೆ ದೂರು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಗೆ ಸೇರಿದ ಪ್ರತಿಯೊಂದು ವಿಷಯದಲ್ಲೂ ಕುಮಾರಸ್ವಾಮಿ ಮತ್ತು ಕೆ.ಆರ್.ನಗರ ಕ್ಷೇತ್ರದ ಶಾಸಕ ಸಾ.ರಾ.ಮಹೇಶ್ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ವರಿಷ್ಛ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.