ಜೆಡಿಎಸ್ ನಾಯಕರ ವಿರುದ್ಧ ಅಪಮಾನಕರ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರ ಪ್ಲ್ಯಾಟ್‌ಗೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಬಹಿರಂಗವಾಗಿ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಅವರ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ಲ್ಯಾಟ್‌ಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ಜಮೀರ್ ಅಹ್ಮದ್ ಅವರ ಗನ್‌ಮ್ಯಾನ್ ಜೊತೆ ವಾಗ್ವಾದಕಿಳಿದಿದ್ದು, ಶಾಸಕರು ಮನೆಯಲ್ಲೇ ಇದ್ದು, ಪ್ರತಿಭಟನಾಕಾರರನ್ನು ಒಳಗಡೆ ಬಿಡದಿರುವ ಹಿನ್ನೆಲೆಯಲ್ಲಿ ಬಂಡಾಯ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನನ್ನನ್ನು ರಾಜಕೀಯದಿಂದ ಮುಗಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ, ನನ್ನನ್ನು ರಾಜಕೀಯದಿಂದ ಮುಗಿಸುವುದು ಸಾಧ್ಯವಿಲ್ಲವೆಂದು ಜಮೀರ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.