ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ ದ್ವೈ ವಾರ್ಷಿಕ ಚುನಾವಣೆಗೆ ಜೆಡಿಎಸ್ ಗೆಲ್ಲುವ ಸಾಮಥ್ರ್ಯವಿರುವ ಕ್ಷೇತ್ರಗಳಲ್ಲಿ ಮಾತ್ರ ಸ್ರ್ಪಸಲು ಚಿಂತನೆ ನಡೆಸಿದೆ.ವಿಧಾನ ಪರಿಷತ್ನ 25 ಕ್ಷೇತ್ರಗಳಿಗೆ ಈಗಾಗಲೇ ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ನ.16ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.25 ಕ್ಷೇತ್ರಗಳಲ್ಲೂ ಸ್ರ್ಪಸಿ ಹಿನ್ನಡೆ ಅನುಭವಿಸುವ ಬದಲು ಗೆಲ್ಲುವಂತಹ ಕ್ಷೇತ್ರಗಳಲ್ಲಿ ಶಕ್ತಿಮೀರಿ ಪ್ರಯತ್ನ ಮಾಡಿ ಚುನಾವಣೆ ಎದುರಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಚುನಾವಣೆಯಲ್ಲಿ ಮತದಾರರು ಸೀಮಿತವಾಗಿರುವುದರಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಹೊಣೆಗಾರಿಕೆ ನೀಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!