ಕೊಡಗಿನ ದಿಡ್ಡಳ್ಳಿಯ ಆದಿವಾಸಿಗಳಿಗೆ ರಾಜ್ಯ ಸರಕಾರ ಬೆತ್ತಲೆ ಭಾಗ್ಯ ನೀಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕೊಪ್ಪಳದ ಕೋಳುರು ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ರೈತ ಸೋಮಪ್ಪನ ಮನೆಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಡ್ಡಿಹಳ್ಳಿಯ ಗಿರಿಜನರು ಹಾಗೂ ಆದಿವಾಸಿಗಳು ಬೆತ್ತಲೆಯಾಗಿ ಓಡಾವುವಂತ ಪರಿಸ್ಥಿತಿ ನಿರ್ಮಾಣವಾಗಿದ್ದೆ ರಾಜ್ಯ ಸರಕಾರದಿಂದ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದ ಮುಖ್ಯಮಂತ್ರಿಗಳಾಗಿ ಗಿರಿಜನರು ಹಾಗೂ ಆದಿವಾಸಿಗಳ ಕುರಿತು ಉಡಾಫೆ ಯಾಗಿ ಮಾತನಾಡಿದ್ದು ಸರಿಯಲ್ಲ. ಕೊಡಲೇ ಆದಿವಾಸಿಗಳಿಗೆ ಪುನರ್‌ವಸತಿ ಕಲ್ಪಿಸಿಕೊಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ