ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಜೆಡಿಎಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.
ಹೌದು. ಚುನಾವಣೆಗೆ ಬೆಂಬಲಿಸಬೇಕಾದ ತೀರ್ಥಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ಮದನ್ ಹಾಗೂ 200 ಕ್ಕೂ ಹೆಚ್ಚು ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿದ್ದಾರೆ.
ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವನ್ನು ಮದನ್ ಅವರು ಸ್ವೀಕರಿಸಿದ್ದು, ಬುಧವಾರ 200 ಕ್ಕೂ ಹೆಚ್ಚು ಪದಾಧಿಕಾರಿಗಳ ಸಹಿತ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲೇ ನಾಯಕರೇ ಪಕ್ಷ ಬಿಟ್ಟಿರುವುದು ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪಗೆ ಭಾರೀ ಆಘಾತವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.