Select Your Language

Notifications

webdunia
webdunia
webdunia
webdunia

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ: ಅನೇಕ ಸಮರ್ಥರಿದ್ದಾರೆ ಎಂದ ಸಚಿವ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ: ಅನೇಕ ಸಮರ್ಥರಿದ್ದಾರೆ ಎಂದ ಸಚಿವ
ಮಂಡ್ಯ , ಮಂಗಳವಾರ, 24 ಜುಲೈ 2018 (15:55 IST)
ಬಹಳಷ್ಟು ಸಮರ್ಥರು ಪಕ್ಷದಲ್ಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷನ್ನು ತೀರ್ಮಾನ ಮಾಡ್ತಾರೆ. ಹೀಗಂತ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದಾರೆ.

ಮಂಡ್ಯದ ದುದ್ದ ಗ್ರಾಮದಲ್ಲಿ ಸಣ್ಣ ಕೈಗಾರಿಕಾ ಸಚಿವ ಸಿ.ಎಸ್‌.ಪುಟ್ಟರಾಜು, ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ್ದು, ಲೋಕಸಭಾ ಚುನಾವಣೆಗೆ ಅನುಕೂಲದ ದೃಷ್ಟಿಯಿಂದ ಉತ್ತಮ ನಾಯಕನಿಗೆ ಪಟ್ಟ ಕಟ್ಟುತ್ತೇವೆ ಎಂದಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರದ್ದು ಮೃದು ಸ್ವಭಾವ. ರಾಜ್ಯ ಪ್ರವಾಸ ಮಾಡಿದಾಗ ಜನ ಸೇರಿದರೆ ಹೊರತು ಮತ ಬರಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ ಎಂದಿದ್ದಾರೆ.

ಬೇರೆ ಇಲಾಖೆಗಳ ಮೇಲೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹಸ್ತಕ್ಷೇಪ ಮಾಡುತ್ತಿಲ್ಲ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿನೇ. ರೇವಣ್ಣ ಅವರ ಮೇಲೆ ಜವಾಬ್ದಾರಿ ಹೆಚ್ಚಿದೆ. ನಮಗೆ ಅವರು ಮಾರ್ಗದರ್ಶಕರು. ಹಸ್ತಕ್ಷೇಪ ಮಾಡಲ್ಲ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ