ಡಿಸಿಎಂ ಸಾಹೇಬ್ರೇ ಇದೇನಾ ಬ್ರ್ಯಾಂಡ್ ಬೆಂಗಳೂರು: ಜೆಡಿಎಸ್ ವ್ಯಂಗ್ಯ

Krishnaveni K
ಸೋಮವಾರ, 12 ಆಗಸ್ಟ್ 2024 (14:42 IST)
ಬೆಂಗಳೂರು: ನಿನ್ನೆ ತಡರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಬಹುತೇಕ ರಸ್ತೆಗಳು ಜಲಾವೃತಗೊಂಡಿರುವ ಬೆನ್ನಲ್ಲೇ ಜೆಡಿಎಸ್ ಪಕ್ಷ ತನ್ನ ಸೋಷಿಯಲ್ ಮೀಡಿಯಾದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟಿದೆ.

ಬೆಂಗಳೂರನ್ನು ಬ್ರ್ಯಾಂಡ್ ಸಿಟಿ ಮಾಡುತ್ತೇವೆ ಎನ್ನುವ ಡಿಕೆ ಶಿವಕುಮಾರ್ ಗೆ ಜೆಡಿಎಸ್ ಪ್ರಶ್ನೆ ಮಾಡಿದೆ. ಒಂದೇ ಗಂಟೆ ಮಳೆಗೆ ಬೆಂಗಳೂರಿನ ರಸ್ತೆಗಳ ಪರಿಸ್ಥಿತಿ ಹೀಗಾಗಿದೆ. ಡಿಸಿಎಂ ಸಾಹೇಬ್ರೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು ಎಂದು ಜೆಡಿಎಸ್ ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದೆ.

‘ಕೇವಲ 3-4 ಗಂಟೆ ಸುರಿದ ಮಳೆಗೆ ಬಹುತೇಕ ಬೆಂಗಳೂರು ಜಲಾವೃತವಾಗಿದೆ. ರಾಜಧಾನಿಯ ಹಲವೆಡೆ ಮನೆಗಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ.  ಇನ್ನು ಸಿಲಿಕಾನ್ ರಸ್ತೆಯ ಬಹುತೇಕ ರಸ್ತೆಗಳು, ಅಂಡರ್ ಪಾಸ್ ಗಳು ಸ್ವಿಮ್ಮಿಂಗ್ ಪೂಲ್ ಆಗಿದೆ. ರಸ್ತೆಗಳು ಕೆರೆಯಂತಾಗಿದ್ದು, ಹಳ್ಳ-ಕೊಳ್ಳಗಳು ಬಿದ್ದಿರುವ ರಸ್ತೆಯಲ್ಲಿ ಚಲಿಸುವುದು ವಾಹನ ಸವಾರರಿಗೆ ನರಕ ಸದೃಶವಾಗಿದೆ. ಬೆಂಗಳೂರು ಗ್ರಾಮಾಭಿವೃದ್ಧಿ ಸಚಿವರೇ ಆಸ್ತಿ ತೆರಿಗೆ ಹೆಚ್ಚಿಸಿ, ಸಾವಿರ ಕೋಟಿಗೂ ಹೆಚ್ಚು ಸಂಗ್ರಹಿಸಿರುವ ಹಣ ಏನಾಗಿದೆ? ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ನೀವು ತೋರಿದ ಉತ್ಸಾಹ, ಈಗ ಬ್ರ್ಯಾಂಡ್ ಬೆಂಗಳೂರು ಮಾಡ್ತೀವಿ ಎಂದು ಬರೀ ಸುಳ್ಳುಗಳನ್ನು ಹೇಳುತ್ತಲೇ ಬೆಂಗಳೂರಿನ ಜನರಿಗೆ ಮಂಕುಬೂದಿ ಎರಚುತ್ತಿದ್ದೀರಿ ಅಷ್ಟೇ. ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಗರಣಗಳಲ್ಲೇ ಮುಳುಗಿರುವಾಗ ಜನ ಸಾಮಾನ್ಯರ ಬಗ್ಗೆ ಯೋಚಿಸಲು ಸಮಯವೆಲ್ಲಿದೆ’ ಎಂದು ಜೆಡಿಎಸ್ ಟಾಂಗ್ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments