Publish Date: Fri, 18 Aug 2017 (14:08 IST)
Updated Date: Fri, 18 Aug 2017 (14:10 IST)
ಜೆಡಿಎಸ್ ಪಕ್ಷದ ಏಳು ಬಂಡಾಯ ಶಾಸಕರು ಬೇಷರತ್ತಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿರುವ ಜೆಡಿಎಸ್ ಬಂಡಾಯ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಕೊಡಲಾಗುವುದು ಎನ್ನುವ ಭರವಸೆ ನೀಡಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ಪಕ್ಷದ ಮುಖಂಡರ ಮೇಲೆ ಎಫ್‌ಐಆರ್ ಹಾಕಿರುವುದು ಇದೇ ಮೊದಲಲ್ಲ. ಹಿಂದೆ ಹಲವಾರು ಬಾರಿ ಭ್ರಷ್ಚಾಚಾರಗಳನ್ನು ಎಸಗಿದ್ದಾಗ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜ್ಯದ ಜನತೆ ನಂಬುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಹುಮತ ಪಡೆದು ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.