ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಪಕ್ಷದಿಂದ ಉಚ್ಚಾಟನೆಗೊಂಡಿರುವ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಗೆ ಆಗಮಿಸಿದ ಶಾಸಕ ಜಮೀರ್ ಅಹ್ಮದ್, ಚೆಲುವರಾಯಸ್ವಾಮಿ ಹಾಗೂ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಿಬಿಎಂಪಿ ಮೇಯರ್ ಚುನಾವಣೆ ಕುರಿತು ಸಿಎಂ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಈ ಕುರಿತು ಅವರು ಬಹಿರಂಗಪಡಿಸಿಲ್ಲ.
ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರೆಬಲ್ ಶಾಸಕ ಚೆಲುವರಾಯಸ್ವಾಮಿ, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸದಂತೆ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಕ್ಕೆ ಕಾವೇರಿ ಭಾಗದ ಶಾಸಕನಾಗಿ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ತದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಚೆಲುವರಾಯಸ್ವಾಮಿ ಅವರ ಮೊಬೈಲ್‌ನಿಂದ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾದೇಗೌಡರಿಗೆ ಕರೆ ಮಾಡಿ ಧರಣಿಯನ್ನು ಕೈಬಿಡುವಂತೆ ಮನವಿ ಮಾಡಿಕೊಂಡರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ