ಬೆಂಗಳೂರು: ಜೆಡಿಎಸ್ ವಿರುದ್ಧ ಬಂಡಾಯವೆದ್ದಿರುವ ಶಾಸಕರು ಮಾತೃ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ.
									
			
			 
 			
 
 			
					
			        							
								
																	ಇದೀಗ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜೆಡಿಎಸ್ ನಿಂದ ಒಟ್ಟು 6 ಮಂದಿ ಬಂಡಾಯ ಶಾಸಕರು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
									
										
								
																	ಚೆಲುವನಾರಾಯಣ ಸ್ವಾಮಿ, ಜಮೀರ್ ಅಹಮ್ಮದ್ ಸೇರಿದಂತೆ ಒಟ್ಟು 6 ಶಾಸಕರು ಮಾರ್ಚ್ 21 ಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ