Select Your Language

Notifications

webdunia
webdunia
webdunia
webdunia

ಅಮಾನತಾಗಿರುವ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಅಮಾನತಾಗಿರುವ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಎಚ್‌.ಡಿ.ಕುಮಾರಸ್ವಾಮಿ
ಮಂಡ್ಯ , ಗುರುವಾರ, 13 ಅಕ್ಟೋಬರ್ 2016 (11:27 IST)
ಪಕ್ಷದಿಂದ ಅಮಾನತಾಗಿರುವ ಬಂಡಾಯ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
 
ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದ ಜೆಡಿಎಸ್ ಕಾರ್ಯಕರ್ತ ನಾರಾಯಣ ಎನ್ನುವವರ ಮನೆಗೆ ಎಚ್‌.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಸಂಸದ ಪುಟ್ಟರಾಜು, ಶಾಸಕ ಡಿ.ಸಿ.ತಮ್ಮಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಉಪಸ್ಥಿತರಿದ್ದರು. 
 
ಜಮೀರ್ ಅಹ್ಮದ್, ಇಕ್ಬಾಲ್ ಅನ್ಸಾರಿ, ಬಂಡಿಸಿದ್ದೇಗೌಡ, ಗೋಪಾಲಯ್ಯ ಚೆಲುವರಾಯ ಸ್ವಾಮಿ, ಅಖಂಡ ಶ್ರೀನಿವಾಸ್ ಮೂರ್ತಿ,ಭೀಮಾನಾಯ್ಕ ಹಾಗೂ ಎಚ್.ಸಿ ಬಾಲಕೃಷ್ಣ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶಿ ಮಹಿಳೆ ಮುಂದೆ ಪ್ಯಾಂಟ್ ಜಿಪ್ ತೆಗೆದ ಸಲ್ಮಾನ್