Publish Date: Fri, 20 Oct 2023 (18:20 IST)
Updated Date: Fri, 20 Oct 2023 (19:30 IST)
ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದು, ತಾವು ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಹೀಗಾಗಿ, ಇಬ್ರಾಹಿಂ ಅವರನ್ನು ಪಕ್ಷದಿಂದ ಹೊರ ಹಾಕುವ ದೃಷ್ಟಿಯಿಂದ ಜೆಡಿಎಸ್ ರಾಜ್ಯ ಘಟಕಗಳನ್ನೇ ವಿಸರ್ಜನೆ ಮಾಡಲಾಗುತ್ತಿದೆ. ಮುಂದುವರೆದು ಜೆಡಿಎಸ್ ರಾಜ್ಯಾಧ್ಯಕ್ಷನಾಗಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.