Publish Date: Tue, 03 Oct 2017 (20:13 IST)
Updated Date: Tue, 03 Oct 2017 (20:15 IST)
ಬಿಜೆಪಿಯ ವಿಸ್ತಾರಕ, ಕಾಂಗ್ರೆಸ್‌ನ ಮನೆ ಮನೆ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷ ಸೆಡ್ಡು ಹೊಡೆಯಲು ನಿರ್ಧರಿಸಿದೆ.
ಜೆಡಿಎಸ್ ಪಕ್ಷದಿಂದ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವಿಸ್ತರಿಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಸಿದ್ದತೆ ನಡೆಸುತ್ತಿರುವಂತೆ ಜೆಡಿಎಸ್ ಕೂಡಾ ತಾನೇನು ಕಮ್ಮಿಯಿಲ್ಲ ಎನ್ನುವಂತೆ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ ವಿಸ್ತರಿಸಲು ವರಿಷ್ಠರು ಹಸಿರು ನಿಶಾನೆ ತೋರಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಹುಮತಗಳಿಸಿದಲ್ಲಿ ಸರಕಾರ ರಚಿಸುತ್ತದೆ. ಇಲ್ಲವಾದಲ್ಲಿ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲು ಸಿದ್ದ ಎಂದು ಜೆಡಿಎಸ್ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.