Select Your Language

Notifications

webdunia
webdunia
webdunia
webdunia

ಉಚ್ಛಾಟನೆಗೆ ಹೆದರಿ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ರು: ಜೆಡಿಎಸ್ ಲೇವಡಿ

DK Shivakumar

Krishnaveni K

ಬೆಂಗಳೂರು , ಮಂಗಳವಾರ, 26 ಆಗಸ್ಟ್ 2025 (14:30 IST)
ಬೆಂಗಳೂರು: ಸದನದಲ್ಲಿ ಆರ್ ಎಸ್ಎಸ್ ಗೀತೆ ಹಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ದಕ್ಕೆ ಜೆಡಿಎಸ್ ಪಕ್ಷ ಲೇವಡಿ ಮಾಡಿದೆ. ಉಚ್ಛಾಟನೆಗೆ ಹೆದರಿ ಕ್ಷಮೆ ಯಾಚಿಸಿದರು ಎಂದಿದೆ.

ಮೊನ್ನೆಯಷ್ಟೇ ಸದನದಲ್ಲಿ ಡಿಕೆ ಶಿವಕುಮಾರ್ ಆರ್ ಎಸ್ಎಸ್ ಗೀತೆ ನಮಸ್ತೇ ಸದಾ ವತ್ಸಲೇ ಹಾಡನ್ನು ಹಾಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ನಲ್ಲಿ ಡಿಕೆಶಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಂದು ಡಿಕೆಶಿ ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಯಾಚಿಸಿದ್ದಾರೆ.

ಇದರ ಬಗ್ಗೆ ಜೆಡಿಎಸ್ ಟ್ವೀಟ್ ಮಾಡಿ ಲೇವಡಿ ಮಾಡಿದೆ. ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ.

ವಿಧಾನಸಭೆಯಲ್ಲಿ #RSS ಗೀತೆ ಹಾಡಿ ಇಟಲಿ ಕಾಂಗ್ರೆಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ. 

ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್‌ ನೀಡಿರಲಿಲ್ಲ.  ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ’ ಎಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Dharmasthala: ಪೊಲೀಸರ ಮುಂದೆ ಗೋಗೆರೆದ ಚಿನ್ನಯ್ಯ ಹೇಳಿದ್ದೇನು