ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

Krishnaveni K
ಸೋಮವಾರ, 24 ನವೆಂಬರ್ 2025 (10:55 IST)
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಫೈಟ್ ಬಗ್ಗೆ ಅಸಹಾಯಕತೆ ಪ್ರದರ್ಶಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಜೆಡಿಎಸ್ ಟ್ವೀಟ್ ಮೂಲಕ ಲೇವಡಿ ಮಾಡಿದೆ.

ಡಿಕೆಶಿ ಮತ್ತು ಸಿದ್ದರಾಮಯ್ಯ ಬಣದವರ ಮನವೊಲಿಸಲು ವಿಫಲರಾದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ ಅಸಹಾಯಕತೆ ಪ್ರದರ್ಶಿಸಿದ್ದರು. ನನ್ನ ಕೈಯಲ್ಲಿ ಏನೂ ಇಲ್ಲ, ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದಿದ್ದರು. ಅವರೇ ಎಐಸಿಸಿ ಅಧ್ಯಕ್ಷರಾಗಿದ್ದುಕೊಂಡು ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದಿರುವುದು ಈಗ ಭಾರೀ ಟ್ರೋಲ್ ಗೊಳಗಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಖರ್ಗೆ ಸಾಹೇಬ್ರೇ ತಾವು ಕಾಂಗ್ರೆಸ್ ಪಕ್ಷದ ಅಧ್ಯಕ್ಷರೋ, ಉಸ್ತುವಾರಿಯೋ ಎಂದು ಪ್ರಶ್ನೆ ಮಾಡಿದೆ. ‘ಈ ಅಸಹಾಯಕತೆಯ ಮಾತುಗಳಿಂದ ತಿಳಿಯುತ್ತದೆ ಅಧ್ಯಕ್ಷರಾಗಿದ್ದರೂ ನಿಮಗೆ ಚಲಾಯಿಸಲು ಯಾವುದೇ ಅಧಿಕಾರ ಇಲ್ಲ.  ತಾವೊಬ್ಬ “ರಬ್ಬರ್ ಸ್ಟಾಂಪ್ ಅಧ್ಯಕ್ಷ” ಎಂಬುದು ಸಾಬೀತಾಗುತ್ತಿದ್ದು, ಜೊತೆಗೆ ಕಾಂಗ್ರೆಸ್ ಪಕ್ಷದ ಗುಲಾಮಿತನವನ್ನು ಜಗಜ್ಜಾಹೀರುಗೊಳಿಸಿದೆ’ ಎಂದು ವ್ಯಂಗ್ಯ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲೇ 3 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು: ಆರ್ ಅಶೋಕ್ ಶಾಕಿಂಗ್ ಮಾಹಿತಿ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments